ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ : ಸಿಎಂ ಬೊಮ್ಮಾಯಿ

ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಸಂಪೂರ್ಣ ಬಹುಮತದೊಂದಿಗೆ ಈ ಬಾರಿ ಬಿಜೆಪಿ ಅಧಿಕಾರಕಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಬಿಜೆಪಿಗೆ ಮತ್ತೆ ಸ್ಪಷ್ಟ ಬಹುಮತ ಬರಲಿದೆ.

ಬಿಜೆಪಿಯಿಂದ ಯಾರು ಪಕ್ಷ ಬಿಟ್ಟು ಹೋಗಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಬಹುಮತದೊಂದಿಗೆ ಈ ಬಾರಿ ಬಿಜೆಪಿ ಅಧಿಕಾರಕಕ್ಕೆ ಬರಲಿದೆ ಎಂದರು.

ವಾಸ್ತವಾಂಶ ಆಧರಿಸಿ ಅಭ್ಯರ್ಥಿ ಆಯ್ಕೆಯಾಗಿದೆ. ಇಂದು ರಾಜ್ಯ ಸಮಿತಿಯ ಸಭೆ ಕರೆದಿದ್ದು, ಎರಡು ದಿನಗಳ ಕಾಲ ನಡೆಯಲಿದೆ. ಸಭೆ ಬಳಿಕ ಕೇಂದ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗುವುದು. 8 ನೇ ತಾರೀಖು ಕೇಂದ್ರದಲ್ಲಿ ಚರ್ಚೆಯಾಗಿ ಪಟ್ಟಿ ಬಿಡುಗಡೆಯಾಗಲಿದೆ ಎಂದರು.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಾಸಗಿ ಚಾನಲ್ ಸಂದರ್ಶನವೊಂದರಲ್ಲಿ ಮತ್ತೆ ಸಿಎಂ ಆಗುವ ಇಚ್ಛೆ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರೇನೋ ಬಯಸಿದ್ದಾರೆ ಆದರೆ ಜನರ ನಾಡಿ ಮಿಡಿತ ಏನಿದೆಯೋ ಯಾರಿಗೆ ಗೊತ್ತು..? ಫಲಿತಾಂಶ ಬಂದ ಮೇಲೆ ಜನರ ಅಭಿಮತ ತಿಳಿಯಲಿದೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲದಿರುವ ಸೀಟಾಗಿ ಗುದ್ದಾಡುತ್ತಿದ್ದಾರೆ ಎಂದ ಮುಖ್ಯ ಮಂತ್ರಿಗಳು ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ,ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೊರಾಡುತ್ತಿದೆ. ಜನರಿಗ, ಕರ್ನಾಟಕಕ್ಕೆ ಒಳ್ಳೆಯದು ಮಾಡಬೇಕು ಎಂಬ ಯೋಚನೆ ಮಾಡಿಲ್ಲ ಎಂದರು.ಸಿದ್ದರಾಯಮಯ್ಯ ಹೇಳಿರೋದು ಅಲ್ಲಿ ಆಂತರಿಕವಾಗಿ ನಡೆಯುತ್ತಿರುವ ವಿದ್ಯಮಾನಗಳ ಪ್ರತಿಬಿಂಬ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ. ಮುಖ್ಯಮಂತ್ರಿ ಮಾಡೋದು ಜನ.ಆದರೆ ಜನರ ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದಾರೆ. ಆ ಕನಸು ನನಸಾಗೋದಿಲ್ಲ ಎಂದರು.