ಸ್ಯಾಂಟ್ರೋ ರವಿ ಕೇಸ್; ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ್ದ ಇನ್ಸ್‌ಪೆಕ್ಟರ್

ಬೆಂಗಳೂರು: ಸ್ಯಾಂಟ್ರೋ ರವಿ ಸಂಚಿನಲ್ಲಿ ಭಾಗಿಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪ್ರವೀಣ್, ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿ ಅಮಾಯಕ ಸಹೋದರಿಯನ್ನು ಬಂಧಿಸಿದ ಸಂಗತಿ ತನಿಖೆಯಿಂದ ಬಯಲಾಗಿದೆ. ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ತನಿಖೆ ನಡೆಸಿ ವರದಿ ನೀಡುವಂತೆ ಕಮಿಷನರ್ ಪ್ರತಾಪ್ ರೆಡ್ಡಿ ಮೂಲಕ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಅವರಿಗೆ ಸೂಚಿಸಿದ್ದರು. ಅದರಂತೆ ತನಿಖೆ ಪೂರ್ಣಗೊಳಿಸಿ, ವರದಿಯನ್ನು ಪ್ರವೀಣ್ ಸೂದ್ ಅವರಿಗೆ ಸಲ್ಲಿಸಲಾಗಿದೆ.