ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್ ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಸ್ಯಾಂಟ್ರೋ ರವಿ ಪತ್ನಿಯ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಬಂಧಿಸಿದಂತ ಕೇಸ್ ಅನ್ನು, ಇದೀಗ ಸಿಸಿಬಿಗೆ ವರ್ಗಾಹಿಸಲಾಗಿದೆ. ಈ ಮೂಲಕ ಸ್ಯಾಂಟ್ರೋ ರವಿ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಂತೆ ಆಗಿದೆ.
ಅಮಾಯಕ ಮಹಿಳೆಯಾಗಿದ್ದಂತ ತನ್ನ ಪತ್ನಿಯ ವಿರುದ್ಧವೇ ಸ್ಯಾಂಟ್ರೋ ರವಿ ಕಾಟನ್ ಪೇಟೆ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಿದ್ದರು.
ಈ ಸಂಬಂಧ ಗೃಹ ಇಲಾಖೆಯಿಂದ ಕಾಟನ್ ಪೇಟೆ ಠಾಣೆಯ ಇನ್ಸ್ ಪೆಕ್ಟರ್ ಅನ್ನು ಅಮಾನತುಗೊಳಿಸಿ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಈ ಪ್ರಕರಣವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಸಿಸಿಬಿಗೆ ವರ್ಗಾಯಿಸಿ ಆದೇಶಿಸಿದ್ದಾರೆ.
ಅಂದಹಾಗೇ ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ವಿರುದ್ಧ ಹಲವು ಕೇಸ್ ದಾಖಲಾಗಿವೆ. ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಆತನ ಬಂಧನಕ್ಕಾಗಿ ಲುಕ್ ಔಟ್ ನೋಟಿಸ್ ಕೂಡ ಜಾರಿಗೊಳಿಸಲಾಗಿದೆ.