ಸ್ಯಾಂಟ್ರೋ ರವಿ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ : ಮಾಜಿ ಸಿಎಂ ಬಿಎಸ್ ವೈ

ಸ್ಯಾಂಟ್ರೋ ರವಿ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ : ಮಾಜಿ ಸಿಎಂ ಬಿಎಸ್ ವೈ

ಶಿವಮೊಗ್ಗ : ಸ್ಯಾಂಟ್ರೋ ರವಿ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ತನಿಖೆ ಬಳಿಕ ಸತ್ಯ ಹೊರಬಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ, ಯಾರು ಏನೂ ಬೇಕಾದರೂ ಹೇಳಬಹುದು.ಸ್ಯಾಂಟ್ರೋ ರವಿ ವಿರುದ್ದ ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿದ್ದು, ಎಷ್ಟು ಸ್ಥಾನ ಭರ್ತಿಯಾಗಲಿದೆ ಎಂಬ ಬಗ್ಗೆ ತಿಳಿದಿಲ್ಲ. ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟ ವಿಚಾರ. ಆದರೆ ಈಶ್ವರಪ್ಪಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಪೇಕ್ಷೆ ಎಂದು ಹೇಳಿದ್ದಾರೆ.