ಸ್ಯಾಂಟ್ರೋ ರವಿಗಾಗಿ ಮೈಸೂರು ಪೊಲೀಸರ ಹುಡುಕಾಟ

ಸ್ಯಾಂಟ್ರೋ ರವಿಗಾಗಿ ಮೈಸೂರು ಪೊಲೀಸರ ಹುಡುಕಾಟ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿಗಾಗಿ ಇದೀಗ ಮೈಸೂರು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೆ.ಎಸ್‌.ಮಂಜುನಾಥ್‌‌‌ ಅಲಿಯಾಸ್‌ ಸ್ಯಾಂಟ್ರೋ ರವಿ ವಿರುದ್ದ ವರದಕ್ಷಿಣೆ ಕಿರುಕುಳ, ವಂಚನೆ, ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಪ್ರಕರಣ ದಾಖಲಾಗಿ 5 ದಿನಗಳು ಕಳೆದರೂ ಸ್ಯಾಂಟ್ರೋ ರವಿ ಮಾತ್ರ ಪೊಲೀಸರ ಕಣ್ಣಿಗೆ ಬೀಳುತ್ತಿಲ್ಲ. ಸದ್ಯ ತಲೆಮರೆಸಿಕೊಂಡಿರುವ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.