ಸ್ಯಾಂಟ್ರೋ ರವಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಸ್ಯಾಂಟ್ರೋ ರವಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಮೈಸೂರು: ಅತ್ಯಾಚಾರ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಕೇಸ್‌‌ಗಳಲ್ಲಿ ಭಾಗಿಯಾಗಿರುವ ಆರೋಪಿ ಸ್ಯಾಂಟ್ರೋ ರವಿಯನ್ನು ಸೋಮವಾರ (ಜ.16) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಧೀಶರು 14 ದಿನಗಳವರಗೆ ನ್ಯಾಯಾಂಗ ಬಂಧನ ವಿಧಿಸಿದ್ದರು. ಸ್ಯಾಂಟ್ರೋ ರವಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌‌‌ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ಇಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ, 6ನೇ ಸತ್ರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.