ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಿರ್ದೇಶಕ `ಸಯ್ಯದ್ ಅಶ್ರಫ್' ಇನ್ನಿಲ್ಲ
ಬೆಂಗಳೂರು : ಅಮ್ಮ ನಾಗಮ್ಮ ಸೇರಿದಂತೆ ಹಲವು ಧಾರವಾಹಿಗಳ ನಿರ್ದೇಶಕ, ನಟ ಸಯ್ಯದ್ ಅಶ್ರಫ್ (42) ಇಂದು ಬೆಳಗ್ಗೆ 3 ಗಂಟೆಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಯ್ಯದ್ ಕನ್ನಡ ಕಿರುತೆರೆಯಲ್ಲಿ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಹಲವು ಧಾರಾವಾಹಿಗಳಿಗೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಸಯ್ಯದ್ ಅಶ್ರಫ್ ನಿಧನಕ್ಕೆ ಬಿ.ಸುರೇಶ, ಶೈಲಜಾ ನಾಗ್ ಹಾಗೂ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತ ಪಡಿಸಿದ್ದಾರೆ.