ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ಇನ್ನಿಲ್ಲ

ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ( Sandalwood director Kiran Govi ) ಅವರಿಗೆ ಇಂದು ದಿಢೀರ್ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು ಆದ್ರೂ, ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಇದ್ದಂತ ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಮೃತಪಟ್ಟಿರೋದಾಗಿ ತಿಳಿದು ಬಂದಿದೆ.

ಮೃತ ನಿರ್ದೇಶಕ ಕಿರಣ್ ಗೋವಿ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಉಳ್ಳಾಲದ ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಂದಾಹಗೇ ಮೃತ ಕಿರಣ್ ಗೋವಿ ಅವರು, ಪಯಣ, ಸಂಚಾರಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಇಂತಹ ಸ್ಯಾಂಡಲ್ ವುಡ್ ನಿರ್ದೇಶಕ ಇನ್ನಿಲ್ಲವಾಗಿದ್ದಾರೆ.