ಚೆಕ್ ಬೌನ್ಸ್ ಪ್ರಕರಣ : ಸ್ಯಾಂಡಲ್ ವುಡ್ ನಿರ್ದೇಶಕ 'ಗುರುಪ್ರಸಾದ್' ಅರೆಸ್ಟ್

ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಗಿರಿನಗರ ಠಾಣೆ ಪೊಲೀಸರು ನಿರ್ದೇಶಕ ಗುರು ಪ್ರಸಾದ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಗುರುಪ್ರಸಾದ್ ಕನ್ನಡ ಚಿತ್ರರಂಗದ ನಟ ಮತ್ತು ನಿರ್ದೇಶಕ. ನಿರ್ದೇಶಕರಾಗಿ ಅವರ ಚೊಚ್ಚಲ ಚಿತ್ರ ಮಠ (2006) ಈ ಸಿನಿಮಾ ಅಂದು ಸಖತ್ ಸದ್ದು ಮಾಡಿತ್ತು. ನಿರ್ದೇಶಕರಾಗಿ ಅವರ ಎರಡನೇ ಚಿತ್ರ ಎದ್ದೇಳು ಮಂಜುನಾಥ. ಈ ಎರಡೂ ಚಲನಚಿತ್ರಗಳನ್ನು ಉತ್ತಮ ವಿಮರ್ಶೆಗಳೊಂದಿಗೆ ಅನೇಕ ಪ್ರಶಸ್ತಿ ಪಡೆದುಕೊಂಡಿತ್ತು.