ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿಸುದ್ದಿ

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿಗಳ 1 ಲಕ್ಷ ಬಹು ಮಹಡಿ ವಸತಿ ಯೋಜನೆ ಅಡಿಯಲ್ಲಿ ಮನೆ ಖರೀದಿ ಮೊತ್ತವನ್ನು ಮತ್ತಷ್ಟು ಕಡಿಮೆ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ ಪ್ರತಿ ಮನೆಗೆ 7.9 ಲಕ್ಷ ರೂ. ನಿಗದಿಯಾಗಿದ್ದು 6.5 ಲಕ್ಷ ರೂಗೆ ಇಳಿಕೆ ಮಾಡಲಾಗಿದೆ. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 7.10 ಲಕ್ಷ ರೂ.ನಿಗದಿಯಾಗಿದ್ದು, ಈ ಮೊತ್ತವನ್ನು 6 ಲಕ್ಷ ರೂ.ಗೆ ಇಳಿಕೆ ಮಾಡಲಾಗಿದೆ.