ಹಾಸನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ: ಸ್ವಯಂ ಘೋಷಿಸಿಕೊಂಡ ಭವಾನಿ ರೇವಣ್ಣ
ಭವಾನಿ ರೇವಣ್ಣ ಅವರು ಅಭ್ಯರ್ಥಿ ಆಗುತ್ತಾರಾ ಎಂಬ ಚರ್ಚೆ ಹಲವು ದಿನಗಳಿಂದ ಜೋರಾಗಿದೆ. ಇದರೊಂದಿಗೆ ಶಾಸಕ ಪ್ರೀತಂ ಗೌಡ ಅವರ ಸವಾಲನ್ನು ಜೆಡಿಎಸ್ ಸ್ವೀಕಾರ ಮಾಡುತ್ತಾ ಎಂಬ ಕುತೂಹಲವೂ ಹಲವರನ್ನು ಕಾಡುತ್ತಿತ್ತು. ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ಬಿಜೆಪಿ ಕ್ಷೇತ್ರವಾಗಿ ಕೆಲವು ಕೆಲಸ, ಕಾರ್ಯಗಳು ಉಳಿದುಕೊಂಡಿವೆ. ಚುನಾವಣೆ ಇನ್ನೇನು ಹತ್ತಿರ ಬಂದಿದೆ.
ಈ ಸಂದರ್ಭದಲ್ಲಿ ಜೆಡಿಎಸ್ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕೆಂದು ಎಲ್ಲರೂ ಕೂಡ ಮಾತನಾಡಿಕೊಂಡು ನಿರ್ಣಯ ತಗೊಂಡಿದ್ದಾರೆ. ಹಾಗಾಗಿ ಇನ್ನು ಸ್ವಲ್ಪ ದಿವಸದಲ್ಲೇ ನಮ್ಮ ಹೆಸರು ಕೂಡ ಹೇಳುತ್ತಾರೆ. ಮುಂದಿನ ಪಟ್ಟಿಯಲ್ಲಿ ನನ್ನ ಹೆಸರು ಪ್ರಕಟ ಆಗಲಿದೆ ಎಂದು ಹೇಳಿದ್ದಾರೆ. ಕಳೆದ ಒಂದು ವರ್ಷದಿಂದ ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು.
ಅಲ್ಲದೇ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರು ಕೂಡ ನಿರಂತರವಾಗಿ ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಈಗಾಗಲೇ ಜೆಡಿಎಸ್ 2023ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ. ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಒಳ್ಳೆಯದು, ಅನುಕೂಲ ಆಗಲಿದೆ.
ಅದಕ್ಕಾಗಿ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು, ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ. ಮತ್ತೊಮ್ಮೆ ಈ ಊರಿಗೆ ಬರುವೆ, ನಿಮ್ಮನ್ನು ಮತ್ತೆ ಭೇಟಿ ಮಾಡುವೆ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.