ಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನದ ಅಮೃತಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಷಣ

ಶ್ರೀಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನದ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿ.24) ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ. ಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನವನ್ನು 1948ರಲ್ಲಿ ರಾಜ್‌ಕೋಟ್‌ನಲ್ಲಿ ಧರ್ಮದರ್ಶಿ ಶ್ರೀ ಧರ್ಮಜೀವಂದಾಸ್ ಸ್ವಾಮಿ ಸ್ಥಾಪಿಸಿದರು. ಈ ಗುರುಕುಲವು ಪ್ರಸ್ತುತ ಪ್ರಪಂಚದಾದ್ಯಂತ 40ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ.