ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿಯುತ್ತಲೇ ಇದೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣಕ್ಕೆ ಮಂಗಳವಾರ 15 ಮಂದಿ ವಿದ್ಯಾರ್ಥಿನಿಯರು ಕಾಲೇಜಿಗೆ ಗೈರುಹಾಜರಾಗಿದ್ದಾರೆ. ಗೈರು ಹಾಜರಾಗಿರುವ ವಿದ್ಯಾರ್ಥಿನಿಯರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರನ್ನು ಭೇಟಿಯಾಗಿದ್ದರು. ಈ ವೇಳೆ ನಿಯಮ ಪಾಲಿಸುವಂತೆ ವಿದ್ಯಾರ್ಥಿನಿಯರಿಗೆ ಜಿಲ್ಲಾಧಿಕಾರಿ ಮನವರಿಕೆ ಮಾಡಿದ್ದರು. ಅಲ್ಲದೆ, ಕಾಲೇಜಿಗೆ ಹಿಜಾಬ್ ಧರಿಸಿ ಹೋಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಸೂಚನೆ ನೀಡಿದ್ದರು. ಹೀಗಾಗಿ ವಿದ್ಯಾರ್ಥಿನಿಯರು ಮಂಗಳವಾರ ಕಾಲೇಜಿಗೆ ಗೈರುಹಾಜರಾಗಿದ್ದಾರೆ ಎಂದು ಹೇಳಲಾಗಿದೆ.