ಹಜ್ ಕೋಟಾವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ

ಹಜ್ ಕೋಟಾವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ

ವದೆಹಲಿ: ಉನ್ನತ ಸಾಂವಿಧಾನಿಕ ಹುದ್ದೆಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ವಿವೇಚನಾಯುಕ್ತ ಹಜ್ ಕೋಟಾವನ್ನು ತೆಗೆದುಹಾಕಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ಹೇಳಿದ್ದಾರೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಇರಾನಿ ಅವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿವೇಚನಾ ಕೋಟಾವನ್ನು ಅವರ ಅವಧಿಯಲ್ಲಿ ಪರಿಚಯಿಸಲಾಗಿದೆ ಎಂದು ಹೇಳಿದರು. 'ಹಜ್ನಲ್ಲಿ ವಿವೇಚನಾ ಕೋಟಾವನ್ನು ಕೊನೆಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ ಮೋದಿ ಅವರು ತಮ್ಮ ಅಧಿಕಾರಾವಧಿಯ ಮೊದಲ ದಿನವೇ ವಿಐಪಿ ಸಂಸ್ಕೃತಿಯನ್ನು ಕೊನೆಗಾಣಿಸುವ ಸಂಕಲ್ಪವನ್ನು ಮುಂದಿಟ್ಟಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಹಜ್ಗೆ ಸಂಬಂಧಿಸಿದಂತೆ ವಿಐಪಿ ಸಂಸ್ಕೃತಿಯನ್ನು ಜಾರಿಗೆ ತರಲಾಯಿತು, ಇದರ ಅಡಿಯಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಹಜ್ ಸಮಿತಿ ಮತ್ತು ಉನ್ನತ ಸಾಂವಿಧಾನಿಕ ಹುದ್ದೆಗಳಲ್ಲಿರುವ ಎಲ್ಲರಿಗೂ ವಿಶೇಷ ಕೋಟಾವನ್ನು ಹಂಚಿಕೆ ಮಾಡಲಾಗಿತ್ತು' ಎಂದು ಅವರು ಖಾಸಗಿ ಮಾಧ್ಯಮವೊಂದರ ಜೊತೆಗೆ ಮಾತನಾಡುತ್ತ ತಿಳಿಸಿದ್ದಾರೆ.