ಹಣಕಾಸಿನ ವಿಚಾರದಲ್ಲಿ ಗಲಾಟೆ ; ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ

ಹಣಕಾಸಿನ ವಿಚಾರದಲ್ಲಿ ಗಲಾಟೆ ; ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ

ಶಿವಮೊಗ್ಗ: ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ.

ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ ಮತ್ತು ಪ್ರೇಮ ಎಂಬವರು ತನ್ನ ಗಂಡನ ಮೇಲೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಮೃತನ ಪತ್ನಿ ನಾಗರತ್ನ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಗಾಯಾಳು ವೆಂಕಟೇಶ್(36) ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ. ಭದ್ರಾವತಿ ಗ್ರಾಮಾಂತರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.