ಹಣದುಬ್ಬರ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡ ಆರ್ಬಿಐ

ನವದೆಹಲಿ: ಆರ್ ಬಿಐನ ಹಣಕಾಸು ನೀತಿ ಸಮಿತಿಯು ಬುಧವಾರ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್ ಗಳಿಂದ ಶೇ.6.25ಕ್ಕೆ ಏರಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಈ ಮೂಲಕ ಬ್ಯಾಂಕ್ ನಿಂದ ಸಾಲ ಪಡೆದವರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಆಹಾರ ಮತ್ತು ಸರಕುಗಳ ಬೆಲೆಗಳು ಏರಿಕೆಯಾಗುತ್ತಿವೆ, ಹೀಗಾಗಿ ರೆಪೋ ದರವನ್ನು 35 ಬೇಸಿಸ್ ಪಾಯಿಂಟ್ ಗಳಿಂದ ಶೇ. 6.25 ಕ್ಕೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.