ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇನ್ನು ಮುಂದೆ ಎಲ್ಲಾ ಹಬ್ಬವೂ ನಡೆಯಲಿದೆ ಎಂದ ಪಿ.ಸಿ. ಮೋಹನ್, ಗರಂ ಆದ ಜಮೀರ್ ಅಹ್ಮದ್

ಅತ್ಯಂತ ಬಿಗಿ ಭದ್ರತೆಯ ನಡುವೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ಜಮೀರ್ ಅಹ್ಮದ್, ಸಂಸದರಾದ ಪಿಸಿ ಮೋಹನ್ ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಿಸಿ ಮೋಹನ್ ಅವರು, ʻʻಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಇದೇ ಮೊದಲು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವ ಸಂಭ್ರಮ ಆಚರಿಸುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಇನ್ನೂ ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡುತ್ತೇವೆ.ಮಾತ್ರವಲ್ಲ, ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಕೃತಿಕ ಹಬ್ಬಗಳನ್ನು ಆಚರಣೆ ಮಾಡಲಿದ್ದೇವೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು. ಬಳಿಕ ಜಮೀರ್ ಅಹ್ಮದ್ ಖಾನ್ ಅವರು ಮಾತನಾಡಿ, ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿ ಕಂದಾಯ ಇಲಾಖೆಗೆ, ಮುಖ್ಯ ಮಂತ್ರಿಗಳಿಗೆ ಹಿಂದೆಯೇ ಪತ್ರ ಬರೆದಿದ್ದೆ. ಗಣರಾಜ್ಯೋತ್ಸವ ಆಚರಣೆ ಮಾಡಿದ್ದು ತುಂಬಾ ಖುಷಿ ಆಗುತ್ತಿದೆ ಎಂದು ಹೇಳಿದರು.