ಹಿರಿಯ ನಟ ದೊಡ್ಡಣ್ಣ ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೃದಯದ ಬಡಿತ ಇಳಿಕೆಯಾಗಿದ್ದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ ಪೇಸ್‌ಮೇಕರ್ ಅಳವಡಿಸಲಾಗಿದೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, 'ಕೆಲ ದಿನಗಳಿಂದ ಅವರಿಗೆ ಸುಸ್ತು, ತಲೆಸುತ್ತು ಕಾಡುತ್ತಿದೆ ಎಂದು ಬುಧವಾರ ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಹೇಳಿದರು. ಈ ಸಂದರ್ಭದಲ್ಲಿ ಇಸಿಜಿ ಮಾಡಿದ ವೇಳೆ ಹೃದಯದ ಬಡಿತ ಇಳಿಕೆಯಾಗಿರುವುದು ತಿಳಿಯಿತು. ಹೀಗಾಗಿ ಗುರುವಾರ ಮುಂಜಾನೆ ಶಸ್ತ್ರಚಿಕಿತ್ಸೆ ನಡೆಸಿ ಪೇಸ್‌ಮೇಕರ್ ಅಳವಡಿಸಲಾಗಿದೆ. ಇದು ಹೃದಯಾಘಾತ ಅಲ್ಲ. ಮೂರು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ' ಎಂದರು.