ಹರ್ಷ ಕೊಲೆ ಪ್ರಕರಣ: 9ನೇ ಆರೋಪಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದಿದ್ದಂತ ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ( Harsha Murder Case ) ಸಂಬಂಧ, ಇಂದು ನ್ಯಾಯಾಲಯವು 9ನೇ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.ಇಂದು ಈ ಸಂಬಂಧ 9ನೇ ಆರೋಪಿ ಸೈಯದ್ ನದೀಮ್ ಎನ್‌ಐಎ ವಿಶೇಷ ಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಿ.ಎಂ ಗಂಗಾಧರ ನಡೆಸಿದರು. ಈ ವೇಳೆ ಕೋರ್ಟ್ ಗೆ ಆರೋಪಿ ಪರ ವಕೀಲರು ಸೈಯದ್ ನದೀಮ್ ಹರ್ಷ ಕೊಲೆ ಪ್ರಕರಣದಲ್ಲಿ ಎಲ್ಲಿಯೂ ನೇರವಾಗಿ ಭಾಗಿಯಾಗಿಲ್ಲ. ಆರೋಪಿಗೆ ಆಶ್ರಯ ನೀಡಿದ ಆರೋಪದಲ್ಲಿ ಬಂಧಿಸಿದ್ದಾರೆ ಎಂದು ಮನವರಿಕೆ ಮಾಡಿಕೊಟ್ಟರು.ಈ ಮನವಿಯನ್ನು ಪುರಸ್ಕರಿಸಿದಂತ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್ ನ್ಯಾಯಾಧೀಶರು ಆರೋಪಿ ಸೈಯದ್ ನದೀಮ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆಅಂದಹಾಗೆ ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷನನ್ನು ಫೆಬ್ರವರಿ 20, 2022ರಂದು ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈಯಲಾಗಿತ್ತು. ಈ ಪ್ರಕರಣದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿದ್ದರು.