ಹಳಿ ಮೇಲೆ ಆಟವಾಡುತ್ತಿದ್ದ ಮಕ್ಕಳಿಗೆ ರೈಲು ಡಿಕ್ಕಿ: ಮೂವರು ಸಾವು
ರೂಪನಗರ: ಶ್ರೀ ಕಿರಾತ್‌ಪುರ ಸಾಹಿಬ್ ಬಳಿ ಭಾನುವಾರ ಮೂವರು ಮಕ್ಕಳು ಪ್ಯಾಸೆಂಜರ್ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನೆಯ ಕುರಿತು ಪಂಜಾಬ್ ಸರ್ಕಾರ ತನಿಖೆಗೆ ಆದೇಶಿಸಿದೆ.
ಸಟ್ಲೆಜ್ ನದಿಯ ಸೇತುವೆಯ ಸಮೀಪವಿರುವ ರೈಲ್ವೇ ಹಳಿಯ ಬಳಿ ವಲಸೆ ಕಾರ್ಮಿಕರ ನಾಲ್ವರು ಮಕ್ಕಳು ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಈ ಘಟನೆ ಸುದ್ದಿ ತಿಳಿದು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.
ಇನ್ನೂ, ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕೋರಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.