ಹಳಿ ತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು

ಹಳಿ ತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು

ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನ ಐದು ಬೋಗಿಗಳು ಶುಕ್ರವಾರ ಮುಂಜಾನೆ ಹಳಿ ತಪ್ಪಿವೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ತೊಪ್ಪೂರು-ಸಿವಾಡಿ ಮಧ್ಯೆ ಹಳಿಗೆ ಬಂಡೆಗಳು ಉರುಳಿಬಿದ್ದ ಪರಿಣಾಮ ರೈಲು ಹಳಿ ತಪ್ಪಿದೆ.

ಮುಂಜಾನೆ 3.50ರ ಸುಮಾರಿಗೆ ಸಂಚರಿಸುತ್ತಿರುವ ರೈಲಿನ ಮೇಲೆ ಬಂಡೆಗಳು ಉರುಳಿದ್ದು, ರೈಲು ಹಳಿ ತಪ್ಪಿದೆ. ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ನೈಋತ್ಯ ರೈಲ್ವೆ ಹೇಳಿಕೆ ಉಲ್ಲೇಖಿಸಿ 'ಎಎನ್‌ಐ' ಸುದ್ದಿಸಂಸ್ಥೆ ವರದಿ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ