ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ಬಿಗ್ ಪ್ಲಾನ್

ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ಬಿಗ್ ಪ್ಲಾನ್

ಮೈಸೂರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪಣ ತೊಟ್ಟಿದ್ದಾರೆ. ಇತ್ತೀಚಿಗೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದ ಬೆನ್ನಲಿ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗಿದೆ. ಹೇಗೆಂದರೆ, ಹೈ ಕಮಾಂಡ್ ಸೂಚನೆ ಪ್ರಕಾರ ಬಿಜೆಪಿ ಕಾರ್ಯಕರ್ತರ ಅಲರ್ಟ್ ಆಗಿದ್ದಾರೆ.

ಏಳು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ರಣತಂತ್ರ ರೂಪಿಸಿದ್ದಾರೆ. ಅದಕ್ಕಾಗಿ, ಬಿಜೆಪಿ ಕಾರ್ಯಕರ್ತರ ಬಲ ವರ್ದನೆಗೆ ಮುಂದಾಗಿದ್ದಾರೆ. ಚುನಾವಣಾ ಚಾಣಕ್ಯನ ಅಣತೆಯಂತೆ ಕಾರ್ಯಕ್ರಮಗಳನ್ನ ಸಿದ್ದಗೊಳಿಸಿದ್ದಾರೆ. ಮೊದಲ ಹಂತದಲ್ಲಿ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದಾರೆ. ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮವನ್ನು ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.