ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ಶಿವರಾಂ ಹೆಬ್ಬಾರ್ ಚಾಲನೆ
ಹಾವೇರಿ : ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ಸಿಕ್ಕಿದೆ.
ಹೌದು. ಏಲಕ್ಕಿ ನಗರಿ ಹಾವೇರಿಯಲ್ಲಿ ಕನ್ನಡ ಕಹಳೆ ಮೊಳಗಿದ್ದು, ಇಂದಿನಿಂದ ಮೂರು ದಿನ ಅಕ್ಷರ ಜಾತ್ರೆ ನಡೆಯಲಿದೆ.
ನಾವು ಬಹಳ ಸಂತೋಷದಿಂದ ಇವತ್ತಿನ ಕಾರ್ಯಕ್ರಮದ ಧ್ವಜಾರೋಹಣ ಮಾಡಿದ್ದೇವೆ. ನಿಗದಿ ಮಾಡಿದ ಏಳು ಗಂಟೆ ಸಮಯಕ್ಕೆ ಧ್ವಜಾರೋಹಣ ಮಾಡಿದ್ದೇವೆ ಎಂದರು. ಹಾವೇರಿಯ ಹೊರವಲಯದ ಅಜ್ಜಯ್ಯ ಗುಡಿಯ ಹತ್ತಿರ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಜರ್ಮನ್ ತಂತ್ರಜ್ಞಾನವನ್ನ ಬಳಿಸಿ ಪ್ರಧಾನ ವೇದಿಕೆ ಹಾಗೂ ಪುಸ್ತಕ ಮಳಿಗೆ, ವಸ್ತು ಪ್ರದರ್ಶನ ಮಾಡಲಾಗಿದೆ. ಸಮ್ಮೆಳನಕ್ಕೆ ಬರುವ ಲಕ್ಷಾಂತರ ಜನರಿಗೆ ಊಟ ಹಾಗೂ 70 ಸಾವಿರ ಜನರಿಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಕ್ಕೆ ಬರುವ ಪ್ರತಿಯೊಬ್ಬ ಬಗೆ ಬಗೆಯಾದ ಊಟ ಸಿದ್ದವಾಗಲಿದೆ. ಬೆಳಗ್ಗೆ ತಿಂಡಿಗೆ ಉಪ್ಪಿಟ್ಟು, ಬೆಲ್ಲದ ಟೀ, , ಬೆಲ್ಲದ ಟೀ ನೀಡಲಾಗುತ್ತದೆ. ಹಾಗೂ 1.5 ಲಕ್ಷ ಜನರಿಗೆ ಮಧ್ಯಾಹ್ನ ಊಟ, ಶೇಂಗಾ ಹೋಳಿಗೆ, ಬದನೆಕಾಯಿ ಪಲ್ಯಾ, ಚಪಾತಿ, ಅನ್ನ, ಮೊಸರು, ಸಾಂಬಾರ್, ಉಪ್ಪಿನ ಕಾಯಿ, ಶೇಂಗಾ ಚಟ್ನಿ ನೀಡಲಾಗುತ್ತಿದೆ.