ಹಾಸನ: ಹಾಸನದ ಬೆಳ್ಳಂಬೆಳಗ್ಗೆ ಜೈಲಿನಲ್ಲಿರುವ ಕೈದಿಗಳಿಗೆ ಬಿಗ್ ಶಾಕ್ ನೀಡಿದೆ. ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಂದ ದಾಳಿ ನಡೆಸಿದ್ದಾರೆ.ಈ ವೇಳೆ ಮೊಬೈಲ್ ಫೋನ್, ಗಾಂಜಾ ಪತ್ತೆಯಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನೇತೃತ್ವದಲ್ಲಿ 15 ಜನ ಪೊಲೀಸ್ ಅಧಿಕಾರಿಗಳು, 100ಕ್ಕೂ ಹೆಚ್ಚು ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.ಜಿಲ್ಲಾ ಕಾರಾಗೃಹದಲ್ಲಿ 328 ಪುರುಷ ವಿಚಾರಣಾಧೀನ ಖೈದಿಗಳು, 17 ಮಹಿಳಾ ವಿಚಾರಣಾಧೀನ ಖೈದಿಗಳಿದ್ದು ಒಂದೂವರೆ ಗಂಟೆಗೂ ಹೆಚ್ಚು ಕಾಲ ಜೈಲಿನೊಳಗೆ ಶೋಧಕಾರ್ಯ ನಡೆಸಿದ್ದಾರೆ. ವಿಚಾರಣಾಧೀನ ಖೈದಿಗಳ ಕೊಠಡಿಗಳ ತಪಾಸಣೆ ವೇಳೆ 2 ಮೊಬೈಲ್, ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ.