ಹಾಸನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯೋಧ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಹಂಪನಗುಪ್ಪೆ ಗ್ರಾಮದಲ್ಲಿ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
28 ವರ್ಷದ ಹೆಚ್.ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಯೋಧ. ಈತ ರೈತ ಹರೀಶ್ ಅವರ ದ್ವಿತಿಯ ಪುತ್ರರಾಗಿದ್ದಾರೆ.
ಆದರೆ ಮಂಗಳವಾರ ಬೆಳಗ್ಗೆ 10 ಗಂಟೆ ಸಮಯವಾದರೂ ಯೋಗೇಶ್ ಮಲಗಿದ್ದ ರೂಂ ಬಾಗಿಲು ತೆರೆದಿರಲಿಲ್ಲ. ಈ ವೇಳೆ ಮನೆಯವರು ಎಷ್ಟು ಕೂಗಿದ್ರೂ ಬಾಗಿಲು ತೆರೆಯದ ಕಾರಣ ಸಂಶಯಗೊಂಡು ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದುಕೊಂಡಿರುವುದು ತಿಳಿದುಬಂದಿದೆ. ಕೂಡಲೇ ಕುಟುಂಬದವರು ಜಿಲ್ಲಾ ಆಸ್ಪತ್ರೆಗೆ ಕರೆ ತಂದಿದ್ದಾರೆ.
ವೈದ್ಯರು ಪರೀಕ್ಷಿಸಿ ಯೋಧ ಯೋಗೀಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆದರೆ ಯೋಧ ಯೋಗಿಶ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಇದೀಗ ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.