ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ದೇವೇಗೌಡರ ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿ ಸನ್ನಿಧಿಯವರೆಗೂ ಪಾದಯಾತ್ರೆ

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಮಾಜಿ ಪ್ರಧಾನಿ ದೇವೇಗೌಡರ ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿ ಸನ್ನಿಧಿಯವರೆಗೂ ಪಾದಯಾತ್ರೆ ಮಾಡಿದ್ದಾರೆ.ಈ ವೇಳೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರಿಗೆ ಆರೋಗ್ಯ ಮತ್ತು ಆಯಸ್ಸು ನೀಡಲಿ ಎಂದು ಪ್ರಾರ್ಥಿಸಿದರು. ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಹೆಚ್.ಡಿ.ದೇವೇಗೌಡರ ಫೋಟೋ ಜೊತೆಗೆ ಕನ್ನಡ ಬಾವುಟ ಕೂಡ ಹಿಡಿದುಕೊಂಡು ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.