ಹಾಸನದಲ್ಲಿ ಹುಲ್ಲಿನ ಬಣವೆಗಳ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಪೂರ್ಣ ಬೆಂಕಿಗಾಹುತಿ

ಹಾಸನ: ಹುಲ್ಲಿನ ಬಣವೆಗಳ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ರಾಗಿ ಹುಲ್ಲು ಹಾಗೂ ಒಂದು ತೆಂಗಿನಮರ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಕಲ್ಲಸಾರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.ಗ್ರಾಮದ ಹನುಮಂತಪ್ಪ ಎಂಬುವರಿಗೆ ಸೇರಿದ ರಾಗಿ ಹುಲ್ಲು ಆಗಿದೆ.
ಇದೀಗ ಬೆಂಕಿ ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ರಾಗಿ ಹುಲ್ಲು ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ