ಹಾಸನದಲ್ಲಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಗೆಲುವು
ಹಾಸನ, ಡಿಸೆಂಬರ್ 14: ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ರಾಜ್ಯದಲ್ಲಿ ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದಲ್ಲಿ ಜಯ ಗಳಿಸುವ ಮೂಲಕ ಜೆಡಿಎಸ್ ಮತ್ತೆ ಪ್ರಾಬಲ್ಯ ಸಾಧಿಸಿದೆ.
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಡಾ.
ಜೆಡಿಎಸ್ ಅಭ್ಯರ್ಥಿಗೆ 2247 ಮತಗಳು, ಕಾಂಗ್ರೆಸ್ ಅಭ್ಯರ್ಥಿಗೆ 724 ಮತಗಳು ಮತ್ತು ಬಿಜೆಪಿ ಅಭ್ಯರ್ಥಿಗೆ 435 ಮತಗಳು ಲಭಿಸಿವೆ. ಡಾ. ಸೂರಜ್ ರೇವಣ್ಣ 1523 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಬಾರಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ
ವಿಧಾನ ಪರಿಷತ್ ಚುನಾವಣೆಯಲ್ಲಿ ಸೂರಜ್ ರೇವಣ್ಣ ಭರ್ಜರಿ ಜಯಗಳಿಸುತ್ತಿದ್ದಂತೆಯೇ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಹಾಸನದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಎದುರು ಸೂರಜ್ ರೇವಣ್ಣ ಪರ ಅವರ ಅಭಿಮಾನಿಗಳು ವಿಜಯೋತ್ಸವ ಆಚರಣೆ ಮಾಡಿದ್ದಾರೆ.
ಕಾಂಗ್ರೆಸ್‌ನ ಗೋಪಾಲಸ್ವಾಮಿ ಪ್ರತಿಕ್ರಿಯೆ
ಕಳೆದ ಲೋಕಸಭಾ ಚುನಾವಣೆ ವೇಳೆ ಜೆಡಿಎಸ್ ಜೊತೆಗಿನ ಮೈತ್ರಿಯೇ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ಅಭ್ಯರ್ಥಿ ಗೋಪಾಲಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಆಗಿರುವ ತಪ್ಪುಗಳನ್ನು ತಿದ್ದಿಕೊಂಡು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ದೇವೇಗೌಡರು ಚುನಾವಣೆಯಲ್ಲಿ ಸೋತು ನಂತರ ಮತ್ತೆ ಗೆದ್ದು ಮುಖ್ಯಮಂತ್ರಿಯಾಗಿದ್ದನ್ನು ನೋಡಿದ್ದೇವೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ. ಗೆದ್ದ ಸೂರಜ್ ರೇವಣ್ಣರಿಗೆ ಅಭಿನಂದನೆ ಎಂದು ಗೋಪಾಲಸ್ವಾಮಿ ತಿಳಿಸಿದ್ದಾರೆ.
ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಅಂತರದಿಂದ ಗೆಲುವು ಭರ್ಜರಿ ಜಯ ಗಳಿಸಿದ್ದಾರೆ.
ಕೊಡಗು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡಗೆ ಸೋಲು ಕಂಡಿದ್ದಾರೆ. ಇವರು ಬಿಜೆಪಿ ನಾಯಕ ಎ. ಮಂಜು ಪುತ್ರರಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ನಡೆದ ಚುನಾವಣೆಯ ಫಲಿತಾಂಶ ಇಂದು (ಮಂಗಳವಾರ) ಪ್ರಕಟವಾಗಲಿದೆ. 75 ಸದಸ್ಯರ ಮೇಲ್ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ.
ರಾಜ್ಯದ 20 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ 1 ಲಕ್ಷಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಶಾಸಕರು ಹಾಗೂ ಸಂಸದರು ಮತ ಚಲಾಯಿಸಿದ್ದಾರೆ. ಜನಪ್ರತಿನಿಧಿಗಳೇ ವೋಟ್ ಹಾಕಿದ್ದರಿಂದ ಶೇ.99ರಷ್ಟು ಪ್ರಮಾಣದಲ್ಲಿ ಮತದಾನ ನಡೆದಿತ್ತು.