ಹಿಂದು' ಅಶ್ಲೀಲ ಪದ ಹೇಳಿಕೆ ವಿವಾದ : ಸೋಶಿಯಲ್ ಮೀಡಿಯಾದಲ್ಲಿ

ಹಿಂದು' ಅಶ್ಲೀಲ ಪದ ಹೇಳಿಕೆ ವಿವಾದ : ಸೋಶಿಯಲ್ ಮೀಡಿಯಾದಲ್ಲಿ

ಬೆಂಗಳೂರು : ಹಿಂದುತ್ವದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇನ್ನೊಂದು ಕಡೆ ಸತೀಶ್ ಪರ ಐ ಸ್ಟ್ಯಾಂಡ್ ವಿಥ್ ಸತೀಶ್ ಜಾರಕಿಹೊಳಿ  ಎಂಬ ಅಭಿಯಾನವನ್ನು ಸೋಷಿಯಲ್ ಮೀಡಿಯಾದಲ್ಲಿ ಆರಂಭಿಸಲಾಗಿದೆ.

ಫೇಸ್ ಬುಕ್ , ಯೂಟ್ಯೂಬ್, ಟ್ವಿಟರ್ ನಲ್ಲಿ ಅಭಿಯಾನ ಕೈಗೊಳ್ಳಲಾಗಿದ್ದು, ಹ್ಯಾಷ್ ಟ್ಯಾಗ್ ಬಳಸಿಅಭಿಯಾನ ಕೈಗೊಳ್ಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸತೀಶ್ ಜಾರಕಿಹೊಳಿ ಪರ ವಿರೋಧ ಚರ್ಚೆಗಳಾಗುತ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ 'ಹಿಂದೂ' ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದ. ಹಿಂದೂ ಪದದ ಅರ್ಥವೇ ಅಶ್ಲೀಲ ಎಂಬುದಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.

ಈ ಹೇಳಿಕೆ ದೊಡ್ಡದಾಗುತ್ತಿದ್ದಂತೆ ಸತೀಶ್ ಜಾರಕಿಹೊಳಿ ಯೂ ಟರ್ನ್ ಹೊಡೆದಿದ್ದು, ನಾನು ಆ ಅರ್ಥದಲ್ಲಿ ಹೇಳಿಲ್ಲ ಎಂದಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಜಾರಕಿಹೊಳಿ , ಸಿಂಧು ನದಿಯಿಂದ ಆಚೆಗೆ ವಾಸಿಸುವ ಜನರ ಕುರಿತು ಪರ್ಷಿಯನ್ ಭೌಗೋಳಿಕ ಪ್ರದೇಶದಲ್ಲಿ ಮೊದಲಿಗೆ ಹಿಂದೂ ಶಬ್ದ ಬಳಕೆಗೆ ಬಂದಿತು. ಕ್ರಿ.ಪ್ರೊ.550-486 ಸಂದರ್ಭದಲ್ಲಿ ನಿರ್ದಿಷ್ಟವಾಗಿ ಆರನೇ ಶತಮಾನದಲ್ಲಿ ನಮೂದಿಸಲಾಗಿದೆ. ಇದರ ಮೂಲ ವಿಕಿಪೀಡೀಯಾವಾಗಿದೆ. ಹಿಂದು ಪದದ ಕುರಿತು ವಿವಿಧ ಲೇಖಕರು ಬರೆದ ವಿಕಿಪೀಡಿಯಾ ಲೇಖನಗಳ ಆಧಾರದಲ್ಲಿ ನಾನು ಮಾತನಾಡಿದ್ದೆ , ಇದು ನನ್ನ ವೈಯಕ್ತಿಯ ಅಭಿಪ್ರಾಯವಲ್ಲ ಎಂದು ಯೂ ಟರ್ನ್ ಹೊಡೆದಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಎನ್ನುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿದ್ದರು.