ಹಿಂದೂ' ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ : ಸತೀಶ್ ಜಾರಕಿಹೊಳಿಗೆ ಸಂಕಷ್ಟ ; ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು
ಬೆಂಗಳೂರು : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.
ವಕೀಲ ದಿಲೀಪ್ ಕುಮಾರ್ ಎಂಬುವವರು ಸತೀಶ್ ಜಾರಕಿಹೊಳಿಯ ಹಿಂದೂ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ.
ಈ ಬಗ್ಗೆ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್ ನ.18 ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಇನ್ನೂ, ಹಿಂದೂ ಪದದ ಅರ್ಥವೇ ಅಶ್ಲೀಲ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸತೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಆಗ್ರಹಿಸಿದೆ.