ಹಿರಿಯ ನಟ ಕೈಕಾಲ ಸತ್ಯನಾರಾಯಣ ನಿಧನ

ತೆಲುಗಿನ ಹಿರಿಯ ನಟ ಕೈಕಾಲ ಸತ್ಯನಾರಾಯಣ ಅವರು ಇಂದು ಮುಂಜಾನೆ ಹೈದರಾಬಾದ್ನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಅವರು ಕಳೆದ ಕೆಲವು ತಿಂಗಳಿಂದ ಹಲವು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೆ ಇಹಲೋಕ ತ್ಯಜಿಸಿದ್ದಾರೆ. ಸತ್ಯನಾರಾಯಣ ಅವರು 1962ರಲ್ಲಿ ತೆರೆಗೆ ಬಂದ ರಾಜ್ಕುಮಾರ್ ನಟನೆಯ ‘ಸ್ವರ್ಣಗೌರಿ’ ಚಿತ್ರದಲ್ಲಿ ಶಿವನ ಪಾತ್ರ ಮಾಡಿದ್ದರು ಎಂಬುದು ವಿಶೇಷ