ಹಿರಿಯ ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಗರಿ

ಹಿರಿಯ ನಟಿ ಆಶಾ ಪರೇಖ್ ಅವರಿಗೆ 2020ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿ ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಅತ್ಯುನ್ನತ ಮನ್ನಣೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಹಿಂದಿ ಚಿತ್ರರಂಗದ ಸಾರ್ವಕಾಲಿಕ ಪ್ರಭಾವಿ ನಟಿಯರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ನಿರ್ದೇಶಕರು ಮತ್ತು ನಿರ್ಮಾಪಕರೂ ಆಗಿರುವ ಪಾರೇಖ್ ಅವರು 1990 ರ ದಶಕದ ಉತ್ತರಾರ್ಧದಲ್ಲಿ ಮೆಚ್ಚುಗೆ ಪಡೆದ ಟಿವಿ ನಾಟಕ "ಕೋರಾ ಕಾಗಜ್" ಅನ್ನು ನಿರ್ದೇಶಿ ಸಿದ್ದರು. ಕಳೆದ ವರ್ಷ ನಟ ರಜಿನಿಕಾಂತ್ ಅವರಿಗೆ ದಾದಾ ಸಾಹೇಬ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.