ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ನಿಧನ

ಹಿರಿಯ ಸಾಹಿತಿ, ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜ.10) ನಿಧನರಾಗಿದ್ದಾರೆ. ಕಾಸರಗೋಡಿನ ಚಂದ್ರಗಿರಿಯಲ್ಲಿ ಜೂನ್ 30, 1936ರಂದು ಹುಟ್ಟಿ ಬೆಳೆದ ಅಬೂಬಕ್ಕರ್, ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು. ಇವರು 10ಕ್ಕೂ ಹೆಚ್ಚು ಕಾದಂಬರಿ, 6 ಕಥಾ ಸಂಕಲನ, 5 ಬಾನುಲಿ ನಾಟಕ, 4 ಲೇಖನ ಬರೆದಿದ್ದಾರೆ. ಸಾರಾ ಅಬೂಬಕ್ಕರ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.