ಹು-ಧಾ ಮಹಾನಗರ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಎಮ್.ಎಫ್.ಹಿರೇಮಠ ನೇಮಕ

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜಾತ್ಯಾತೀತ ಜನತಾದಳದ ಜಿಲ್ಲಾ ಉಪಾಧ್ಯಕ್ಷರಾಗಿ ಈ ಕೂಡಲೇ ಜಾರಿಗೆ ಬರುವಂತೆ, ಎಮ್.ಎಫ್.ಹಿರೇಮಠ ಅವರನ್ನು
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು
ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಒಂದು ಗುರುತರ ಜವಾಬ್ದಾರಿಯುತ ಸ್ಥಾನವನ್ನು ಅಲಂಕರಿಸಿ, ಪಕ್ಷದ ಶಿಸ್ತು ಹಾಗೂ ಸಿದ್ಧಾಂತಗಳ ಅಡಿ, ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಪಕ್ಷವನ್ನು ಸಧೃಡವಾಗಿ ಕಟ್ಟಲು ತಾವು ಶ್ರಮಿಸುತ್ತೀರಿ ಎಂದು ನಂಬಿದ್ದೇವೆ. ಈ ಮೂಲಕ ತಕ್ಷಣದಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಕೋರುವುದಾಗಿ ಸಿ.ಎಂ.ಇಬ್ರಾಹಿಂ ಅವರು, ಎಮ್.ಎಫ್.ಹಿರೇಮಠ ಅವರಿಗೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.