ಹುಟ್ಟು ಹಬ್ಬದ ಸಂಭ್ರಮದಲ್ಲಿ ಹೆಚ್.ಡಿ ಕುಮಾರಸ್ವಾಮಿ; ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹೆಚ್.ಡಿ ಕುಮಾರಸ್ವಾಮಿ; ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಇಂದು ಹೆಚ್ ಡಿ ಕುಮಾರಸ್ವಾಮಿ ಅವರ 64 ನೇ ಹುಟ್ಟುಹಬ್ಬ ಹಿನ್ನೆಲೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮ ಪಕ್ಷಾತೀತವಾಗಿ ನಡೆಸಲಾಗುತ್ತಿದೆ ಎಂದು ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಈಗಾಗಲೇ ತಿರುಪತಿ ಮಾದರಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ರವು ಸಂಜೆ 6 ಘಂಟೆಗೆ ಆರಂಭಗೊಳ್ಳಲಿದೆ. ನಾಡಿನ ನಮ್ಮ ಭಾಗದ ಜನತೆ ಕಲ್ಯಾಣೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.