ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಆಗುತ್ತಿಲ್ಲಎಂದ ಯಶ್; ಕಾರಣವೇನು

ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಆಗುತ್ತಿಲ್ಲಎಂದ ಯಶ್; ಕಾರಣವೇನು

ಜ. 8ರಂದು ಯಶ್ ಹುಟ್ಟುಹಬ್ಬ. ಆದರೆ ಈ ಬಾರಿ ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಯಶ್​ ಹೇಳಿದ್ದಾರೆ. ಪತ್ರದ ಮೂಲಕ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು, ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ತರಲು ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.