ಹುಟ್ಟುಹಬ್ಬದ ಸಂಭ್ರಮದಲ್ಲಿ 'ಆಪರೇಷನ್ ಅಲಮೇಲಮ್ಮ' ಖ್ಯಾತಿಯ ನಟ ರಿಷಿ

'ಆಪರೇಷನ್ ಅಲಮೇಲಮ್ಮ' ಸಿನಿಮಾ ಖ್ಯಾತಿಯ ನಟ ರಿಷಿ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ರಿಷಿ ಆರಂಭದಲ್ಲಿ 2013ರಂದು 'ಮನಿ ಹನಿ ಶನಿ' ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಟಿ.ಎನ್. ಸೀತಾರಾಮ್ ನಿರ್ದೇಶನದ 'ಮಹಾಪರ್ವ' ಧಾರಾವಾಹಿಯಲ್ಲಿ ನಟಿಸಿ ಕಿರುತೆರೆಗೆ ಪಾದಾರ್ಪಣೆ ಮಾಡಿದರು.
ನಟ ರಿಷಿ 2017ರಂದು 'ಆಪರೇಷನ್ ಅಲಮೇಲಮ್ಮ' ಚಿತ್ರದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. ಮೊದಲ ಸಿನಿಮಾದಲ್ಲೇ ರಿಷಿ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತು. ರಿಷಿ ಇತ್ತೀಚೆಗೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಒಬ್ಬ ಪ್ರತಿಭಾವಂತ ನಟರಾಗಿದ್ದಾರೆ.