ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹಕ ತಾರೆ; 2ನೇ ಇನ್ನಿಂಗ್ಸ್ ಆರಂಭ

ಮೋಹಕ ತಾರೆ ರಮ್ಯಾ ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಹಲವು ವರ್ಷಗಳ ಬಳಿಕ ಚಿತ್ರರಂಗದತ್ತ ತಿರುಗಿರುವ ರಮ್ಯಾ "ಆಪಲ್ಬಾಕ್ಸ್ ಸ್ಟುಡಿಯೋಸ್" ನಿರ್ಮಾಣ ಸಂಸ್ಥೆ ಸ್ಥಾಪಿಸಿ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. 2003ರಲ್ಲಿ ತೆರೆಕಂಡ ಅಪ್ಪು ಅಭಿನಯದ "ಅಭಿ" ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಈಗ "ಉತ್ತರಕಾಂಡ" ಚಿತ್ರದ ಮೂಲಕ 2ನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಈ ಚಿತ್ರಕ್ಕೆ ಡಾಲಿ ಧನಂಜಯ್ ನಾಯಕನಾಗಿದ್ದು, ಕೆ.ಆರ್.ಜಿ. ಸಂಸ್ಥೆ ನಿರ್ಮಾಣ ಮಾಡುತ್ತಿದೆ.