ಹುಬ್ಬಳ್ಳಿ ಯುವಜನೋತ್ಸವಕ್ಕೆ ಆಗಮಿಸಿದ ಪ್ರಧಾನಿ : ಮಾರ್ಗ ಮಧ್ಯೆ ಕಾರು ನಿಲ್ಲಿಸಿ, 'ಜನರತ್ತ ಕೈ ಬೀಸಿದ ಮೋದಿ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿ ನಡೆಯುವ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆ ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಭಾರತೀಯ ವಾಯು ಸೇನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಏರ್ಪೋರ್ಟ್‌ನಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡುವಮಾರ್ಗ ಮಧ್ಯೆ ಕಾರು ನಿಲ್ಲಿಸಿ ಜನರತ್ತ ಕೈಯನ್ನು ಬೀಸಿದ್ದಾರೆ.
ಯುವಜನೋತ್ಸವ ಕಾರ್ಯಕ್ರಮ ಹಿನ್ನೆಲೆ ನಗರಿ ಹುಬ್ಬಳ್ಳಿ ನವ ವಧುವಿನಂತೆ ಗೋಕುಲ ರಸ್ತೆ ಸಿಂಗಾರಗೊಂಡಿದೆ. ನಗರದ ಎತ್ತ ನೋಡಿದ್ರು ಕೆಸರಿಮಯವಾಗಿದೆ. ಪ್ರಧಾನಿ ಆಗಮಿಸುತ್ತಿದ್ದಂತೆ ಜನರು ಕೂಡ ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ 3.20 ನಿಮಿಷಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.