ಹುಬ್ಬಳ್ಳಿಗೆ ಪ್ರಧಾನಿ ಆಗಮನ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಬಂದೋಬಸ್ತ್​​​​​ : ADGP ಅಲೋಕ್‌ ಕುಮಾರ್‌

ಹುಬ್ಬಳ್ಳಿಗೆ ಪ್ರಧಾನಿ ಆಗಮನ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಬಂದೋಬಸ್ತ್​​​​​ : ADGP ಅಲೋಕ್‌ ಕುಮಾರ್‌

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಭರ್ಜರಿ ಸಿದ್ದತೆ ಮಾಡಿದ್ದು,, ಈಗಾಗಲೇ ಜಿಲ್ಲೆಯಾದ್ಯಂತ ಪೊಲೀಸರಿಂದ ಹದ್ದಿಕಣ್ಣು ಇಡಲಾಗಿದೆ.

ಸುದ್ದಿಗಾರರೊಂದಿಗೆ ಎಡಿಜಿಪಿ ಅಲೋಕ್‌ ಕುಮಾರ್‌ ಮಾತನಾಡಿ, ಇಂದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಎಸ್​​ಪಿಜಿ ತನ್ನ ಸುಪರ್ದಿಗೆ ಪಡೆದಿದೆ. ಏರ್​​ಪೋರ್ಟ್​ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್​​​​​ ಕೈಗೊಳ್ಳಲಾಗಿದೆ. ಪ್ರಧಾನಿ ಆಗಮಿಸುವ ಒಂದು ಗಂಟೆ ಮುನ್ನ ರಸ್ತೆ ಸಂಚಾರ ಬಂದ್​​​​ ಮಾಡಲಾಗುತ್ತದೆ. 60 ಪಿಐ, 18 ಕೆಎಸ್‌ಆರ್‌ಪಿ, ಗರುಡಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸುಗಮ ಸಂಚಾರಕ್ಕೆ ಬೆಂಗಳೂರಿನಲ್ಲಿ ಟ್ರಾಫಿಕ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಪ್ರಧಾನಿ ಮೋದಿ ಬರುವ ಮಾರ್ಗದುದ್ದಕ್ಕೂ ಎಸ್ಕಾರ್ಟ್‌ ಸಿಬಂದಿ ನಿಯೋಜನೆ ಮಾಡಲಾಗಿದೆ. ಯಾವ ಸಂಘಟನೆ, ಯಾರಾದರು ಮನವಿ ಕೊಡುವುದಿದ್ದರೆ ಪೊಲೀಸ್‌ ಕಮೀಷನರ್‌, ಡಿಸಿಗೆ ಮನವಿ ಕೊಡಬಹುದು ಹುಬ್ಬಳ್ಳಿಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.