ಹುಬ್ಬಳ್ಳಿಯಲ್ಲಿ ಖಾಸಗಿ ಬಸ್ ಪಲ್ಟಿ ; ನಾಲ್ವರಿಗೆ ಗಂಭೀರ ಗಾಯ
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ನೇಕಾರ ನಗರದ ಬ್ರಿಡ್ಜ್ ಮೇಲಿಂದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಗುಜರಾತ್ ಕಡೆಗೆ, ಬಸ್ ಹೊರಟಿದ್ದ ವೇಳೆ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಎದುರುಗಡೆಯಿಂದ ಏಕಾಏಕಿ ಇನ್ನೊಂದು ವಾಹನ ಬಂದ ಪರಿಣಾಮ, ಅಪಘಾತ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಕೂಡಲೇ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ.