ಹೆಚ್.ಡಿ.ಕುಮಾರಸ್ವಾಮಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸವಾಲು
ಬೆಂಗಳೂರು: ಗೃಹ ಸಚಿವರ ಮನೆಯಲ್ಲಿಯೇ ಸ್ಯಾಂಟ್ರೊ ರವಿ ಕಂತೆ ಕಂತೆ ಹಣ ಎಣಿಸಿರುವ ಫೋಟೋ ವೈರಲ್ ಆಗಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಕಿಡಿಕಾರಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಕುಮಾರಸ್ವಾಮಿ ನನ್ನ ಮೇಲಿನ ಆರೋಪ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹೆಚ್.ಡಿ.ಕೆ, ಹಸಿ ಸುಳ್ಳು ಹೇಳುವ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ. ಯಾವ ಕಾರಣಕ್ಕೆ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಇದರಿಂದ ಕುಮಾರಸ್ವಾಮಿ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸ್ಯಾಂಟ್ರೋ ರವಿ ನನ್ನ ಮನೆಯಲ್ಲಿ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಆರೋಪಿಸಿದ್ದಾರೆ. ಕುಮಾರಸ್ವಾಮಿ ಸತ್ಯಕ್ಕೆ ಅಪವಾದವಾಗುವಂತಹ ಆರೋಪ ಮಾಡುತ್ತಿದ್ದಾರೆ. ಗೃಹ ಸಚಿವನಾಗಿರುವ ನನ್ನನ್ನು ದಿನಕ್ಕೆ ನೂರಾರು ಜನ ಭೇಟಿಯಾಗುತ್ತಾರೆ. ಎಲ್ಲರ ಹಿನ್ನೆಲೆಯನ್ನೂ ಸೋಸಿ ನೋಡಲು ಆಗಲ್ಲ. ಸ್ಯಾಂಟ್ರೋ ರವಿ ಹಿನ್ನೆಲೆ ಬಗ್ಗೆ ತನಿಖೆ ನಡೆಸಿ ವಿಚಾರಣೆಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.