ಕಾಂಗ್ರೆಸ್ ಬೆಂಬಲದಿಂದ ನಿಖಿಲ್ ಕುಮಾರಸ್ವಾಮಿ,ದೇವೇಗೌಡರು ಸೋತರು: ಹೆಚ್.ಡಿ ಕುಮಾರಸ್ವಾಮಿ ಆರೋಪ

ಕಾಂಗ್ರೆಸ್ ಬೆಂಬಲದಿಂದ ನಿಖಿಲ್ ಕುಮಾರಸ್ವಾಮಿ,ದೇವೇಗೌಡರು ಸೋತರು: ಹೆಚ್.ಡಿ ಕುಮಾರಸ್ವಾಮಿ ಆರೋಪ

ಳ್ಳಾರಿ: ಹೆಚ್.ಡಿ ದೇವೇಗೌಡರು ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಮಾಡಿದ್ದರು. ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋಗಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲ ನೀಡದಿದ್ದಕ್ಕೆ ನಿಖಿಲ್ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಚುನಾವಣೆಯಲ್ಲಿ ಸೋತರು ಎಂದು ಆರೋಪಿಸಿದ್ದಾರೆ.30 ವರ್ಷದಿಂದ ನಮಗೆ ಕುಟುಂಬ ರಾಜಕಾರಣದ ಲೇಬಲ್ ಕೊಟ್ಟಿದ್ದಾರೆ.

ವರುಣಾದಲ್ಲಿ ಪುತ್ರನ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ಹೊರಗೆ ಹೋಗುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು ಬರುವುದಿಲ್ಲ. ಹೀಗಾಗಿ ಪುತ್ರನನ್ನು ತರುತ್ತಿದ್ದಾರೆ. ಯಡಿಯೂರಪ್ಪ, ಕೆ.ಎಸ್​.ಈಶ್ವರಪ್ಪಗೂ ಅವರ ಮಕ್ಕಳ ಬಗ್ಗೆಯೇ ಚಿಂತೆ ಎಂದರು.

ಇನ್ನೊಂದು ವಾರದಲ್ಲಿ ಜೆಡಿಎಸ್​ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇನೆ. 2028ರಲ್ಲಿ 2 ರಾಷ್ಟ್ರೀಯ ಪಕ್ಷಗಳನ್ನು ರಾಜ್ಯದ ಜನ ‌ತಿರಸ್ಕಾರ ಮಾಡುತ್ತಾರೆ. 2018ರಲ್ಲಿ ಕಾಂಗ್ರೆಸ್ ಷರತ್ತು ಹಾಕಿ ಅಧಿಕಾರ ನೀಡಿತ್ತು. ಸ್ವತಂತ್ರವಾಗಿ ಅಧಿಕಾರ ನಡೆಸಲು ಕಾಂಗ್ರೆಸ್​ ನಾಯಕರು ನನಗೆ ಬಿಡಲಿಲ್ಲ. ಸಮ್ಮಿಶ್ರ ಸರ್ಕಾರವಿದ್ದರೆ ಬಡತನವನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂದರು.