ಹೆಚ್. ವಿಶ್ವನಾಥ್, ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಹೆಚ್. ವಿಶ್ವನಾಥ್, ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಬಿಜೆಪಿ ಎಂಎಲ್ ಸಿ ಹೆಚ್. ವಿಶ್ವನಾಥ್ ಹಾಗೂ ಸಂದೇಶ್ ನಾಗರಾಜ್ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಫೆಬ್ರವರಿ 1 ರಂದು ಹೆಚ್.

ವಿಶ್ವನಾಥ್ ಹಾಗೂ ಸಂದೇಶ್ ನಾಗರಾಜ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ನಾನು ಸ್ವತಂತ್ರ, ಯಾವುದೇ ಪಕ್ಷಕ್ಕೆ ಸೇರಿದವನಲ್ಲ. ನಾನು ಕಾಂಗ್ರೆಸ್​ಗೆ ಬೆಂಬಲ ನೀಡುತ್ತೇನೆ. ನಾನು ಯಾವುದೇ ಷರತ್ತುಗಳಿಲ್ಲದೇ ಕಾಂಗ್ರೆಸ್​ ಸೇರುತ್ತಿದ್ದೇನೆ. ಇದು ಪಕ್ಷಾಂತರವಲ್ಲ, ನನ್ನ ಮಾತೃ ಪಕ್ಷಕ್ಕೆ ವಾಪಸ್​ ಹೋಗುತ್ತಿದ್ದೇನೆ. ನಾನು ಪಕ್ಷ ಬಿಡುವಾಗ ಎಲ್ಲರಿಗೂ ತಿಳಿಸಿಯೇ ಹೋಗುತ್ತೇನೆ ಎಂದು ಈ ಹಿಂದೆ ಹೆಚ್.ವಿಶ್ವನಾಥ್ ಹೇಳಿದ್ದರು.