ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್, ವಿಚ್ಛೇದನಕ್ಕೆ ತಡೆಯಾಜ್ಞೆ

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪತ್ನಿ ಸವಿತಾ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೈಸೂರಿನ ಕೋರ್ಟ್ ಎಂ.ಪಿ.ಕುಮಾರಸ್ವಾಮಿ ದಂಪತಿಗೆ ವಿಚ್ಛೇದನ ನೀಡಿತ್ತು. ಆದರೆ ಇದನ್ನು ಪ್ರಶ್ನಿಸಿ ಪತ್ನಿ ಸವಿತಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಿಚ್ಛೇದನ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.