ಹೊತ್ತಿ ಉರಿದ ಚೀನಾದ ಕೆಮಿಕಲ್ ಫ್ಯಾಕ್ಟರಿ !

ಈಶಾನ್ಯ ಚೀನಾದಲ್ಲಿ ರಾಸಾಯನಿಕ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿ, 12 ಮಂದಿ ನಾಪತ್ತೆಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಲಿಯಾನಿಂಗ್ ಪ್ರಾಂತ್ಯದ ಪಂಜಿನ್ ನಗರದಲ್ಲಿ ಭಾನುವಾರ 34 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ಚೀನಾ ಸೆಂಟ್ರಲ್ ಟೆಲಿವಿಷನ್ ವರದಿ ಮಾಡಿದೆ. ಈ ದುರಂತ ಸಂಭವಿಸಿರುವುದಕ್ಕೆ ಕಾರಣವೇನೆಂದು ಪೊಲೀಸ್ ಅಧಿಕಾರಿಗಳು ಇನ್ನೂ ತನಿಖೆ ನಡೆಸುತ್ತಿದ್ದಾರೆ.