ಹೊಸ ವರ್ಷಾಚರಣೆ; ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಹೊಸ ವರ್ಷಾಚರಣೆ; ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದೆ. ಕೊರೊನಾ ರೂಪಾಂತರಿ ಆತಂಕದ ನಡುವೆ ಹೊಸ ವರ್ಷದ ಸ್ವಾಗತಕ್ಕೆ ಜನರು ಸಿದ್ಧತೆ ನಡೆಸಿದ್ದಾರೆ. ಆದರೆ ರಾಜ್ಯದ ಕೆಲ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ವಿಧಿಸಲಾಗಿದೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31ರ ರಾತ್ರಿ 9 ಗಂಟೆಯಿಂದ 2023ರ ಜನವರಿ 1ರ ಬೆಳಿಗ್ಗೆ 5 ಗಂಟೆಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ಹೆಚ್ಚು ಜನರು ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ