ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ: ಹೋರಿ ತಿವಿದು ಸ್ಥಳದಲ್ಲೇ ಯುವಕ ಸಾವು

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ: ಹೋರಿ ತಿವಿದು ಸ್ಥಳದಲ್ಲೇ ಯುವಕ ಸಾವು

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ಯುವಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ದೊಡ್ಡಕೇರಿಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕಡದಕಟ್ಟೆಯ ರಾಕೇಶ್(25) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.

ಶಿಕಾರಿಪುರದ ದೊಡ್ಡಕೇರಿಯಲ್ಲಿ ದೀಪಾವಳಿ ಪ್ರಯುಕ್ತ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ರಾಕೇಶ್ ಆಗಮಿಸಿದ್ದ.

ಸ್ಪರ್ಧೆಯಲ್ಲಿದ್ದ ಹೋರಿ ಏಕಾಏಕಿ ಜನರ ಮೇಲೆ ನುಗ್ಗಿ ಹಲವರಿಗೆ ತಿವಿದಿದ್ದು, ರಾಕೇಶ್ ಹೊಟ್ಟೆ ಹಾಗೂ ತಲೆ ಭಾಗಕ್ಕೆ ಕೊಂಬಿನಿಂದ ಹೋರಿ ತಿವಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 15 ಕ್ಕೂ ಅಧಿಕ ಮಂದಿ ಹೋರಿ ತಿವಿತದಿಂದ ಗಾಯಗೊಂಡಿದ್ದಾರೆ. ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.