ಪ್ರಜಾಪ್ರಭುತ್ವದ ಉಳಿವು ಕಾಂಗ್ರೆಸ್‌ನಿಂದ ಸಾಧ್ಯ: ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: 'ಜಾತಿ-ಧರ್ಮಗಳ ನಡುವೆ ವಿಷಬೀಜ ಬಿತ್ತಿ ಅಧಿಕಾರದ ಗಳಿಸುತ್ತಿರುವ ಕೆಲವು ಪಕ್ಷಗಳು ದೇಶವನ್ನು ಆರ್ಥಿಕ ದಿವಾಳಿತನ, ಸಾಮಾಜಿಕ ಅರಾಜಕತೆಯತ್ತ ಕೊಂಡೊಯ್ಯುತ್ತಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ' ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಹುಬ್ಬಳ್ಳಿ- ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಾಲಿಕೆ ಸದಸ್ಯರಾದ ಇಲಿಯಸ್ ಮನಿಯಾರ್, ನಿರಂಜನ ಹಿರೇಮಠ, ಮೆಹಮೂದ್ ಕೋಳೂರು, ಪ್ರಸನ್ನ ಮಿರಜಕರ್, ಇಕ್ಬಾಲ್ ಚಿತ್ತೇವಾಲೆ, ವಸೀಂ ಹಕಿಂ, ನಿಸ್ಸಾರ್ ನೀಲಗಾರ ಇದ್ದರು.
ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ: ಸಮಿತಿ ಕಚೇರಿಯಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಸಮಿತಿ ಅಧ್ಯಕ್ಷ ಅನಿಲಕುಮಾರ್ ಪಾಟೀಲ ಇದ್ದರು.