‘ಆಸ್ಕರ್’ ಅರ್ಹತೆ ಯಾದಿಯಲ್ಲಿ ‘ವಿಕ್ರಾಂತ್ ರೋಣ’ ಚಿತ್ರ

‘ಆಸ್ಕರ್’ ಅರ್ಹತೆ ಯಾದಿಯಲ್ಲಿ ‘ವಿಕ್ರಾಂತ್ ರೋಣ’ ಚಿತ್ರ

ಪ್ರತಿಷ್ಠಿತ 95ನೇ ಆಸ್ಕರ್ ಅಕಾಡಮಿ ಪ್ರಶಸ್ತಿಯ ಅರ್ಹತೆ ವಿಭಾಗದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಕೂಡ ಕಾಣಿಸಿಕೊಂಡಿದೆ. ನಟನಾ ವಿಭಾಗದಲ್ಲಿ ಈ ಸಿನಿಮಾ ಆಯ್ಕೆಯಾಗಿದ್ದು, ಕನ್ನಡದ ಎರಡು ಚಿತ್ರಗಳು ಈ ಬಾರಿ ಆಸ್ಕರ್ ಅಂಗಳದಲ್ಲಿವೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ವಿಕ್ರಾಂತ್ ರೋಣ ಜೊತೆ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದಿದೆ ಎಂದು ವರದಿಯಾಗಿದೆ.